Political News: ಬಸವಣ್ಣನವರ ಐಕ್ಯಸ್ಥಳವಾದ ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಮಹಿಳೆಯರು ಮಾಂಸದೂಟ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಹಿರಿಯ ನಾಯಕ ಯತ್ನಾಳ್, ಹಿಂದೂ ದೇವಸ್ಥಾನಗಳಿಗೆ ತನ್ನದೇ ಆದ ಪಾವಿತ್ರ್ಯತೆ ಇರುತ್ತದೆ. ಜ್ಞಾನಯೋಗಿ ಬಸವಣ್ಣನವರ ಐಕ್ಯ ಸ್ಥಳದಲ್ಲಿ ನುಗ್ಗಿ ಮಾಂಸಾಹಾರ ಸೇವಿ ಸ್ಥಳದ ಪಾವಿತ್ರ್ಯತೆ ಹಾಳುಗೆಡುವುತ್ತಿರುವ ಇವರು ನಾಗರೀಕ ಸಮಾಜಕ್ಕೆ ಕಳಂಕ ತಂದಿದ್ದಾರೆ. ಇವರಿಗೆ ಕಿಂಚಿತ್ತೂ ವಿವೇಕ, ಧರ್ಮನಿಷ್ಠೆ, ಪ್ರಜ್ಞೆ ಇದ್ದಿದ್ದರೆ ಈ ಪವಿತ್ರ ಜಾಗದಲ್ಲಿ ಮಾಂಸಾಹಾರ ಸೇವಿಸುತ್ತಿರಲಿಲ್ಲ.
ಪೊಲೀಸರು ಹಾಗೂ ಜಿಲ್ಲಾಡಳಿತ ಇವರ ಕೃತ್ಯವನ್ನು public nuisance ಎಂದು ಪರಿಗಣಿಸಿ ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಬಸವಣ್ಣನವರ ಐಕ್ಯ ಸ್ಥಳದಲ್ಲಿ ಪಾವಿತ್ರ್ಯತೆ, ನೈರ್ಮಲ್ಯತೆ, ಶ್ರದ್ದೆ ಕಾಪಾಡಲು ಸೂಕ್ತ ನಿಯಮಾವಳಿಗಳನ್ನು ರೂಪಿಸಲಿ ಹಾಗೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿ. ಇಲ್ಲಿ ಪಾಲಿಸಬೇಕಾದ ಕನಿಷ್ಠ ಶಿಷ್ಟಾಚಾರವನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಿ ಹಾಗೂ ಅದನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ , ಪಾಲಿಸದೆ ಅಸಡ್ಡೆ ತೋರಿದವರ ಮೇಲೆ ದಂಡ ಹಾಗೂ ಕಾನೂನು ಕ್ರಮ ಜರುಗಿಸಲಿ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.




