Hubli: ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸಿ ಸೇವಾ ಜ್ಯೋತಿ ಯಾತ್ರೆ

Hubli: ದೇಶದ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 25 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಸೇವಾ ಜ್ಯೋತಿ ಯಾತ್ರೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ನಡೆಯಿತು.

ಸೇವಾ ಮನೋಭಾವ, ರಾಷ್ಟ್ರೀಯ ಏಕತೆ ಹಾಗೂ ದೇಶಪ್ರೇಮದ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವಾ ಪಯಣವನ್ನು ಸ್ಮರಿಸಿದ ಮುಖಂಡರು, ದೇಶದ ಅಭಿವೃದ್ಧಿ ಹಾಗೂ ವಿಕಸಿತ ಭಾರತದ ಸಂಕಲ್ಪದ ಕುರಿತು ಸಂದೇಶ ಸಾರಿದರು.

ಸೇವಾ ಜ್ಯೋತಿ ಯಾತ್ರೆಯ ಮೂಲಕ ರಾಷ್ಟ್ರೀಯ ಏಕತೆ, ದೇಶಪ್ರೇಮ ಹಾಗೂ ಸೇವಾ ಮನೋಭಾವವನ್ನು ಜನರಲ್ಲಿ ಮತ್ತಷ್ಟು ಬಲಪಡಿಸುವ ಪ್ರಯತ್ನ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ರಾಜ್ಯಸಭಾ ಸದಸ್ಯರಾದ ಪ್ರೊ. ಎಂ. ನಾಗರಾಜ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ, ಎಸ್.ವಿ. ಸಂಕನೂರ, ಲಿಂಗರಾಜ ಪಾಟೀಲ, ವಿಭಾಗ ಪ್ರಭಾರಿಗಳಾದ ಜಯತೀರ್ಥ ಕಟ್ಟಿ, ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

25 ವರ್ಷಗಳ ಸಾರ್ವಜನಿಕ ಸೇವೆಯನ್ನು ಗೌರವಿಸುವುದರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

ಸೇವೆಯೇ ಸಂಕಲ್ಪ… ದೇಶದ ಅಭಿವೃದ್ಧಿಯೇ ಗುರಿ… ವಿಕಸಿತ ಭಾರತವೇ ಮುಂದಿನ ಹೆಜ್ಜೆ ಎಂಬ ಆಶಯದೊಂದಿಗೆ ನಡೆದ ಸೇವಾ ಜ್ಯೋತಿ ಯಾತ್ರೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಗಮನ ಸೆಳೆಯಿತು.

About The Author