Hubli News: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ..!
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.. ಮತಗಳ್ಳತನದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿದರು..!
ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಈ ಸಂಬಂಧ ತಹಶೀಲ್ದಾರ್ಗೆ ಮನವಿ ಸಲ್ಲಿಸಲು ಮುಂದಾಗಿದ್ದರು..!
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯ ಮೂಲಕ ಮುಂದೆ ಸಾಗುತ್ತಿದ್ದಂತೆ ಪೊಲೀಸರು ರಸ್ತೆಯ ಮಧ್ಯದಲ್ಲೇ ತಡೆದರು.. ಸರ್ ಸಿದ್ದಪ್ಪ ಕಂಬಳಿ ವೃತ್ತದ ಬಳಿ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆಯುವ ಕಾರ್ಯಾಚರಣೆ ಆರಂಭಿಸಿದರು..!
ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ನೂಕಾಟ ನಡೆಯಿತು.. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮುಂದಾದಾಗ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು..!
ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.. ತಹಶೀಲ್ದಾರ್ಗೆ ಮನವಿ ಸಲ್ಲಿಸಲು ಹೊರಟಿದ್ದ ಕಾರ್ಯಕರ್ತರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದ ಪೊಲೀಸರ ಕ್ರಮದ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು..!
ಒಟ್ಟಿನಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ, ಪೊಲೀಸರ ತಡೆ ಮತ್ತು ನೂರಕ್ಕೂ ಹೆಚ್ಚು ಕಾರ್ಯಕರ್ತರ ವಶದೊಂದಿಗೆ ಮತ್ತಷ್ಟು ಕಾವೇರಿದೆ..!
ಮತದಾನದ ಹಕ್ಕು ಮತ್ತು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಹೋರಾಟ ಮುಂದುವರಿಸಿದ್ದು, ಈ ಪ್ರತಿಭಟನೆ ಹುಬ್ಬಳ್ಳಿಯಲ್ಲಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ..!




