Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಏಕೆಂದರೆ ಪವಿತ್ರಾ ಇರುವ ಬ್ಯಾರಕ್ನಲ್ಲಿ 30 ಮಂದಿ ವಿಚಾರಣಾಧೀಕ ಖೈದಿ ಇದ್ದು, ಮಧ್ಯರಾತ್ರಿಯವರೆಗೂ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ವಿದೇಶಿ ಖೈದಿಗಳಿಂದ ತುಂಬ ಕಿರಿಕಿರಿಯಾಗುತ್ತಿದೆ ಎಂದು ಪವಿತ್ರಾ ದೂರು ನೀಡಿದ್ದಾರೆ.
ಅಲ್ಲದೇ ಖುದ್ದು ನ್ಯಾಯಾಧೀಶರೇ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಎಂದಿರುವ ಪವಿತ್ರಾ ಗೌಡ, ಈ ಹಿಂದೆ ಕೂಡ ನಾನು ಈ ಬಗ್ಗೆ ಅರ್ಜಿ ಸಲ್ಲಿಸಿದರೂ, ಆ ಬಗ್ಗೆ ಯಾವುದೇ ಕ್ರಮ ಕೈಗ“ಂಡಿಲ್ಲವೆಂದು ಪವಿತ್ರಾ ಗೌಡ ಹೇಳಿದ್ದಾರೆ. ಇದೀಗ ಮತ್ತೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ2 ಆರೋಪಿಯಾಗಿದ್ದು, ದರ್ಶನ್ ಎ1 ಆರೋಪಿಯಾಗಿ ಜೈಲು ಸೇರಿದ್ದಾರೆ.




