Hubli News: ಹುಬ್ಬಳ್ಳಿಯ ಮದುರು ಎಸ್ಟೇಟ್ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ರೈತರು ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ ಎನ್ನಲಾಗಿದೆ.
ಮನೆಯ ಎರಡು ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಇನ್ಸ್ಪೆಕ್ಟರ್ ಹಾಗೂ ಪಿಎಸ್ಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭದ್ರತೆಯ ಮೇಲೆ ನಿಗಾ ವಹಿಸಿದ್ದಾರೆ.
ರೈತರ ಹೋರಾಟದ ಬಿಸಿ.. ಕೇಂದ್ರ ಸಚಿವರ ಮನೆಗೆ ಬಿಗಿ ಭದ್ರತೆ..!
ಆದರೆ, ಭದ್ರತೆಯ ಹೆಸರಿನಲ್ಲಿ ನಿರ್ಮಿಸಿರುವ ತಡೆಗೋಡೆಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕರ ನಿತ್ಯದ ಓಡಾಟಕ್ಕೆ ಅಡಚಣೆಯಾಗುತ್ತಿದ್ದು, ಸ್ಥಳೀಯರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ನಿವಾಸಿಗಳು ಆರೋಪಿಸುತ್ತಿದ್ದಾರೆ.
ಒಂದೆಡೆ ಸಚಿವರ ಭದ್ರತೆ, ಮತ್ತೊಂದೆಡೆ ಸಾರ್ವಜನಿಕರ ಸಮಸ್ಯೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸುವುದರ ಜೊತೆಗೆ, ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಕಬ್ಬು ಬೆಳೆಗಾರರ ಹೋರಾಟದ ತೀವ್ರತೆಯ ನಡುವೆ ಮದುರು ಎಸ್ಟೇಟ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಸಾರ್ವಜನಿಕರ ಸಮಸ್ಯೆಗೆ ಪೊಲೀಸ್ ಇಲಾಖೆ ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ




