Udupi News: ನಾಳೆ ಉಚ್ಚಿಲ ದಸರಾ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಆಗಮನ

Political News: ನಾಳೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಉಚ್ಛಿಲ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉಡುಪಿ ಆಗಮಿಸಲಿದ್ದಾರೆ. ಸಿಎಂ ಸ್ವಾಗತಕ್ಕಾಗಿ ಉಡುಪಿ ಸಿದ್ಧವಾಗಿದ್ದು, ಜಿಲ್ಲಾಡಳಿತ ಮತ್ತು ಪೋಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕ“ಂಡಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 5 ವರ್ಷಗಳಿಂದ ಸಂಭ್ರಮದ ನವರಾತ್ರಿ ಹಬ್ಬ ಆಚರಿಸುತ್ತ ಬರಲಾಗುತ್ತಿದೆ. ಕುದ್ರೋಳಿ ದಸರಾದಂತೆ, ಉಚ್ಚಿಲ ದಸರಾವೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಉಚ್ಚಿನ ದೇವಸ್ಥಾನದಲ್ಲಿ ಶಾರದೆ ಮತ್ತು ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗುತ್ತದೆ. ಅಲ್ಲದೇ ಪ್ರತಿದಿನ ಸಾಂಸ್ಕೃತಿ ಕಾರ್ಯಕ್ರಮವನ್ನೂ ಮಾಡಲಾಗುತ್ತದೆ. ನಾಳೆ ಮಹಿಳಾ ದಸರಾ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಜೆ 4ರ ಬಳಿಕ ದೇವಸ್ಥಾನಕ್ಕೆ ಆಗಮಿಸಿ, ದೇವಿ ದರ್ಶನ ಪಡೆದು, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

ಅಲ್ಲದೇ, ತುಳು ಭಾಷೆಯನ್ನು ರಾಜ್ಯದ ಎರಡನೇ ಪ್ರಮುಖ ಭಾಷೆಯಾಗಿ ಘೋಷಿಸಿದ್ದಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಗೌರವ ಸಮರ್ಪಣೆ ಇರಲಿ. ಇನ್ನುಳಿದಂತೆ ದಸರಾ ಕಾರ್ಯಕ್ರಮವೂ ನಡೆಯಲಿದ್ದು, ಸಾವಿರಾರು ಭಕ್ತರು ಇಲ್ಲಿ ಭೇಟಿ ನೀಡಿ, ದಸರಾ ವೈಭವವನ್ನು ಕಣ್ತುಂಬಿಕ“ಳ್ಳಲಿದ್ದಾರೆ.

About The Author