Hubli: ಕಬ್ಬು ಹೋರಾಟಕ್ಕೆ ಬ್ರೇಕ್ ಹಾಕಲು ಶಾಸಕರು, ಸಚಿವರಿಂದ ರೈತರ ಜತೆ ತಡರಾತ್ರಿ ಸಭೆ

Hubli News: ಕಬ್ಬು ಬೆಳೆಗಾರರ ಹೋರಾಟ ಕ್ಷಣಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಅಲರ್ಟ್ ಆಗಿದ್ದಾರೆ.. ರೈತರ ಪಾದಯಾತ್ರೆ ಕೈಬಿಡಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ತಡರಾತ್ರಿವರೆಗೂ ಮಹತ್ವದ ಸಭೆ ನಡೆಸಿದ್ದಾರೆ.. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಸಿ.ಸಿ. ಪಾಟೀಲ್ ಹಾಗೂ ಸಂಸದ ಜಗದೀಶ್ ಶೆಟ್ಟರ್ ರೈತ ಮುಖಂಡರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.. ಆದ್ರೆ ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಹೊರಬಿದ್ದಿಲ್ಲ ಎನ್ನಲಾಗಿದೆ..

ಕಬ್ಬು ಬೆಳೆಗಾರರ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ.. ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ ಹೆಜ್ಜೆ ಹಾಕಿದ್ದಾರೆ.. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತ ಮುಖಂಡರ ಮನವೊಲಿಕೆಗೆ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಮುಂದಾಗಿದ್ದಾರೆ..

ಹುಬ್ಬಳ್ಳಿಯಲ್ಲಿ ತಡರಾತ್ರಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಸಿ.ಸಿ. ಪಾಟೀಲ್ ಹಾಗೂ ಸಂಸದ ಜಗದೀಶ್ ಶೆಟ್ಟರ್ ರೈತ ಮುಖಂಡರ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ.. ರೈತರು ಪಾದಯಾತ್ರೆ ಕೈಬಿಡುವಂತೆ ಮನವೊಲಿಸಲು ಪ್ರಯತ್ನಿಸಿದ್ದಾರೆ.. ಕೇಂದ್ರ ಸರ್ಕಾರ ಯಾವತ್ತೂ ರೈತರ ಪರವಾಗಿದೆ ಎಂದು ಭರವಸೆ ನೀಡಿದ್ದಾರೆ..

ಇನ್ನು ಮಧ್ಯರಾತ್ರಿವರೆಗೂ ನಡೆದ ಸಭೆಯಲ್ಲಿ ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗಿದೆ.. ಬೇಡಿಕೆಗಳ ಈಡೇರಿಕೆಗಾಗಿ ಈಗಾಗಲೇ ಸಮಿತಿ ರಚನೆಯಾಗಿದ್ದು, ಸಮಿತಿ ಶೀಘ್ರದಲ್ಲೇ ಸಭೆ ಸೇರಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಿದೆ ಎನ್ನಲಾಗಿದೆ.. ಆದರೆ, ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ..

ಒಟ್ಟಿನಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ಬೀಳುತ್ತಾ ಅಥವಾ ಪಾದಯಾತ್ರೆ ಮತ್ತಷ್ಟು ತೀವ್ರಗೊಳ್ಳುತ್ತಾ ಎಂಬುದು ಮುಂದಿನ ಬೆಳವಣಿಗೆಗಳಿಂದ ಸ್ಪಷ್ಟವಾಗಬೇಕಿದೆ..

About The Author