Political News: ರೈತರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Political News: ಕಬ್ಬು ಬೆಳೆಗಾರರ ಹೋರಾಟದ ನಡುವೆಯೇ ರೈತ ಮುಖಂಡರ ಜೊತೆ ಮಹತ್ವದ ಸಭೆ ನಡೆಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ರೈತ ಮುಖಂಡರ ಜೊತೆ ಸಭೆ ನಡೆಸಿದ್ದು, ರೈತರ ಬೇಡಿಕೆಗಳ ಈಡೇರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಜೋಶಿ ಹೇಳಿದ್ದಾರೆ. ಸಮಿತಿ ವರದಿಯ ಆಧಾರದ ಮೇಲೆ ರೈತರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಜೊತೆಗಿನ ಸಭೆ ಬಳಿಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ.. ರೈತರ ಬೇಡಿಕೆಗಳ ಈಡೇರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಅತ್ಯಂತ ಸಕಾರಾತ್ಮಕವಾಗಿದೆ ಎಂಬ ಸಂದೇಶ ರವಾನೆ..

ರೈತ ಮುಖಂಡರಾದ ಚೂನ್ನಪ್ಪ ಪೂಜಾರಿ, ಶಶಿಕಾಂತ್ ಗುರೂಜಿ ಸೇರಿದಂತೆ ರೈತರ ನಿಯೋಗದ ಜೊತೆ ಸಭೆ ನಡೆಸಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯಲ್ಲಿ ರೈತರ ಬೇಡಿಕೆಗಳು ಹಾಗೂ ಸಮಿತಿ ವರದಿ ಸಲ್ಲಿಕೆ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ಸಮಿತಿ ತನ್ನ ವರದಿ ಸಲ್ಲಿಸಲು ಅನುಕೂಲಕರ ವಾತಾವರಣ ಕಲ್ಪಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಇನ್ನು, ತಾವು, ಜಗದೀಶ್ ಶೆಟ್ಟರ್ ಹಾಗೂ ಇತರ ನಾಯಕರು ರೈತರು ಹೋರಾಟ ಕೈಬಿಡುವಂತೆ ಮನವಿ ಮಾಡಿದ್ದೇವೆ. ಸಭೆಯಲ್ಲಿ ಕೈಗೊಂಡ ತೀರ್ಮಾನಗಳಿಗೆ ರೈತರು ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸಮಿತಿ ವರದಿಯ ಆಧಾರದ ಮೇಲೆ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಒಟ್ಟಿನಲ್ಲಿ, ರೈತರ ಬೇಡಿಕೆಗಳ ಕುರಿತು ನಡೆದ ಸಭೆಯಲ್ಲಿ ಸಕಾರಾತ್ಮಕ ಚರ್ಚೆ ನಡೆದಿದ್ದು, ಸಮಿತಿ ವರದಿಯ ಬಳಿಕ ಮುಂದಿನ ನಿರ್ಧಾರಗಳ ಬಗ್ಗೆ ನಿರೀಕ್ಷೆ ಮೂಡಿದೆ. ರೈತರು ತಮ್ಮ ಹೋರಾಟವನ್ನು ಕೈಬಿಡುತ್ತಾರೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.

About The Author