Hubli News: ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಇಂಡಿಪಂಪ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ರೈತರು, ಹುಬ್ಬಳ್ಳಿ-ಕಾರವಾರ ರಸ್ತೆಯನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ರಸ್ತೆಗಿಳಿದ ಅನ್ನದಾತರ ಹೋರಾಟದ ವರದಿ ಇಲ್ಲಿದೆ ನೋಡಿ…
ಹೌದು… ಕಬ್ಬಿಗೆ ಸೂಕ್ತ ಹಾಗೂ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಅನ್ನದಾತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಜಮಾಯಿಸಿದ ರೈತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ರಸ್ತೆಯಲ್ಲಿಯೇ ಕುಳಿತು ಆಳುವ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ರೈತರು, ಹುಬ್ಬಳ್ಳಿ-ಕಾರವಾರ ರಸ್ತೆಯನ್ನು ಬಂದ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು, ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದ ರೈತರು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಕಬ್ಬಿಗೆ ಸೂಕ್ತ ಬೆಲೆ ಸಿಗುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ. ಅನ್ನದಾತರ ಆಕ್ರೋಶಕ್ಕೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.




