Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಮೇಲೆ ಇಡಿ ದಾಳಿ ನಡೆಸಿ, ಸಿಲುಕಿಸಲು ದೆಹಲಿಯಲ್ಲಿ ಪ್ಲಾನ್ ಮಾಡಲಾಗುತ್ತಿದೆ ಎಂದು ಪರೋಕ್ಷವಾಗಿ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್ ಖರ್ಗೆ, ದೆಹಲಿಯ ಅಧಿಕಾರದ ಕಾರಿಡಾರ್‌ಗಳಲ್ಲಿ ಕೇಳಿಬರುತ್ತಿರುವ ಗುಸುಗುಸು ಏನೆಂದರೆ, ಕೆಪಿಎಸ್‌ಸಿ ತನಿಖೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ನನ್ನ ಸಂಪುಟ ಸಹೋದ್ಯೋಗಿಗಳು ಮತ್ತು ನನ್ನ ವಿರುದ್ಧ ಐಟಿ ಹಾಗೂ ಇ.ಡಿ. ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವಂತೆ ಕೇಂದ್ರ ಸಚಿವರೊಬ್ಬರು ಮೋದಿ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೆಸೆಸ್‌ನ ಹೊಸ ಗ್ರೂಪ್ ಡಿ ನೇಮಕಾತಿಯೂ ಆಗಿರುವ ಅವರು, ಕೆಪಿಎಸ್‌ಸಿ ನೇಮಕಾತಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮತ್ತು ನನ್ನ ಹೆಸರನ್ನು ಸುಳ್ಳು ಆರೋಪಗಳ ಮೂಲಕ ಸಿಲುಕಿಸಲು, ಪ್ರಕರಣದ ಎಲ್ಲ ಆರೋಪಿಗಳ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಇ.ಡಿ.ಯನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
‘ಅತ್ಯಂತ ಕಷ್ಟಪಟ್ಟು ಕೆಲಸ ಮಾಡುವ’ ಗೌರವಾನ್ವಿತ ಸಚಿವರು ತಾವೊಬ್ಬರೇ ಸಂಕಷ್ಟಕ್ಕೆ ಸಿಲುಕಲು ಸಿದ್ಧರಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ತಮ್ಮ ಹತಾಶೆಯಲ್ಲಿ, ತಮ್ಮದೇ ಮೈತ್ರಿಕೂಟದ ಪಾಲುದಾರರನ್ನೂ ತಮ್ಮೊಂದಿಗೆ ಸಂಕಷ್ಟಕ್ಕೆ ಎಳೆಯಲು ಅವರು ನಿರ್ಧರಿಸಿದಂತಿದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.




