ಗೃಹಲಕ್ಷ್ಮಿ ಯೋಜನೆಯ 3 ಕಂತಿನ 7405.86 ಕೋಟಿ ರೂ. ಹಣ ಬಿಡುಗಡೆ: ದಿನೇಶ್ ಗೂಳಿಗೌಡ

Bengaluru News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು ಒಳಗೊಂಡ ಮೂರು ಕಂತಿನ 7405.86 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಮ್ಮೆಲೆ ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೂ 33 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಈಗ 34ನೇ ಕಂತಿನ 2500 ಕೋಟಿ ರೂ., 35ನೇ ಕಂತಿನ 2452.93 ಕೋಟಿ ರೂ. ಮತ್ತು 36ನೇ ಕಂತಿನ 2452.93 ಕೋಟಿ ರೂ. ಹಣವನ್ನು ಒಮ್ಮೆಲೆ ಬಿಡುಗಡೆ ಆಗಿದೆ. ಇದರಿಂದ ಅಕ್ಟೋಬರ್ ವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ 86,838.36 ಕೋಟಿ ರೂ. ಗೃಹಲಕ್ಷ್ಮಿ ಹಣ ತಲುಪಲಿದೆ. ಈ ಮೂಲಕ ಪ್ರತಿ ಫಲಾನುಭವಿಗೆ 72,000 ರೂ. ತಲುಪಿದಂತಾಗಲಿದೆ ಎಂದು ಹೇಳಿದ್ದಾರೆ.

ಬರದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ನೀಡಲಿದೆ. ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

About The Author