Political News: ದೇವಾಲಯದ ಬಾಗಿಲಿಗೂ ರಾಜಕೀಯ ದ್ವೇಷದ ಬೀಗ ಹಾಕಿದ ಕಾಂಗ್ರೆಸ್!: ಛಲವಾದಿ ನಾರಾಯಣಸ್ವಾಮಿ

Political News: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿಯ ಬಿಸಿಲು ಮಾರಮ್ಮ ದೇವಾಲಯಕ್ಕೆ ಇಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಭೇಟಿ ನೀಡಿದ್ದರು. 

ಆದರೆ ಅವರು ಬರುವುದನ್ನು ಮೈಕ್‌ನಲ್ಲಿ ಅನೌನ್ಸ್ ಮಾಡಿದಾಗ, ಸಡನ್ ಆಗಿ ವ್ಯಕ್ತಿಯೋರ್ವ ಬಾಗಿಲಿಗೆ ಬೀಗ ಹಾಕಿ ಹೋಗಿದ್ದಾನೆ. ಹಾಗಾಗಿ ನಿಖಿಲ್ ಕುಮಾರ ಸ್ವಾಮಿ 15 ನಿಮಿಷ ಕಾದು, ಹಾಗೆ ಹೋಗಿದ್ದಾರೆ.

ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರೇ ಈ ಕೆಲಸ ಮಾಡಿದ್ದಾರೆಂದು ಆರೋಪಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಬಿಜೆಪಿ ಹಿರಿಯ ನಾಯಕ ಛಲವಾದಿ ನಾರಾಯಣಸ್ವಾಮಿ, ನಿಖಿಲ್ ಕುಮಾರ್ ಅವರನ್ನು ದೇವಾಲಯದೊಳಗೆ ಪ್ರವೇಶಿಸದಂತೆ ತಡೆದು, ದೇವಸ್ಥಾನಕ್ಕೆ ಬೀಗ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಅತ್ಯಂತ ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇವಾಲಯಗಳು ರಾಜಕೀಯ ದ್ವೇಷ ಸಾಧಿಸುವ ತಾಣಗಳಲ್ಲ; ಅವು ಭಕ್ತರ ನಂಬಿಕೆ, ಭಕ್ತಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಪವಿತ್ರ ಕೇಂದ್ರಗಳು. ರಾಜಕೀಯ ವಿರೋಧವನ್ನು ಎದುರಿಸುವ ಧೈರ್ಯವಿಲ್ಲದೆ ಧಾರ್ಮಿಕ ಕ್ಷೇತ್ರಗಳನ್ನೇ ರಾಜಕೀಯ ಸಂಘರ್ಷಕ್ಕೆ ಎಳೆದು ತರುವುದು ಕಾಂಗ್ರೆಸ್‌ನ ಅಸಹಿಷ್ಣು ಹಾಗೂ ದುರಹಂಕಾರದ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಛಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಧಾರ್ಮಿಕ ನಂಬಿಕೆಯನ್ನು ಅನುಸರಿಸುವ ಮತ್ತು ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಹಕ್ಕಿದೆ. ಈ ಹಕ್ಕಿಗೆ ಅಡ್ಡಿಪಡಿಸುವವರ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

ರಾಜಕೀಯ ದ್ವೇಷದ ಕಾರಣಕ್ಕೆ ದೇವಾಲಯಗಳ ಬಾಗಿಲು ಮುಚ್ಚುವ ಸಂಸ್ಕೃತಿ ಪ್ರಜಾಪ್ರಭುತ್ವಕ್ಕೂ, ಧಾರ್ಮಿಕ ಸ್ವಾತಂತ್ರ್ಯಕ್ಕೂ ಮಾಡುವ ಅಪಮಾನ. ಇಂತಹ ದಬ್ಬಾಳಿಕೆಯನ್ನು ರಾಜ್ಯದ ಜನತೆ ಎಂದಿಗೂ ಸಹಿಸುವುದಿಲ್ಲ! ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

About The Author