ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ..?: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Political News: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿಯ ಬಿಸಿಲು ಮಾರಮ್ಮ ದೇವಾಲಯಕ್ಕೆ ಇಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಭೇಟಿ ನೀಡಿದ್ದರು. 

ಆದರೆ ಅವರು ಬರುವುದನ್ನು ಮೈಕ್‌ನಲ್ಲಿ ಅನೌನ್ಸ್ ಮಾಡಿದಾಗ, ಸಡನ್ ಆಗಿ ವ್ಯಕ್ತಿಯೋರ್ವ ಬಾಗಿಲಿಗೆ ಬೀಗ ಹಾಕಿ ಹೋಗಿದ್ದಾನೆ. ಹಾಗಾಗಿ ನಿಖಿಲ್ ಕುಮಾರ ಸ್ವಾಮಿ 15 ನಿಮಿಷ ಕಾದು, ಹಾಗೆ ಹೋಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೆಲ್ಲಾ ದೊಡ್ಡ ಸುದ್ದಿನಾ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರಿಯಾಂಕ್ ಮರುಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿರುವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಬೀಗ ಹಾಕುವವರನ್ನೆಲ್ಲ ನಾವು ಬಾಗಿಲು ಕಾದು ತಡೆಯಲು ಸಾಧ್ಯವಿಲ್ಲ. ಪ್ರತಿದಿನ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗುತ್ತದೆ. ಅದನ್ನು ಯಾರೂ ಕೂಡ ಪ್ರಶ್ನಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಅಲ್ಲದೇ ಈ ರೀತಿ ನಡೆದಾಗ ದೂರು ನೀಡಿದ್ರೆ, ಕ್ರಮ ಕೈಗ“ಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

About The Author