Hubli News: ಕತ್ತಿ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ – ಆರೋಪಿ ಅರೆಸ್ಟ್

Hubli News: ಹುಬ್ಬಳ್ಳಿಯಲ್ಲಿ ಕತ್ತಿ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಗಬ್ಬೂರು ಸರ್ಕಲ್ ಬಳಿ ರಾತ್ರಿ ವೇಳೆ ಕತ್ತಿ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಖ್ವಾಜಾಹುಸೇನ್ ನದಾಫ್ ಎಂಬಾತನನ್ನು ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಬಂಧಿಸಿದೆ. ಬಂಧಿತನಿಂದ ಕತ್ತಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿಯ ಗಬ್ಬೂರು ಸರ್ಕಲ್‌ನಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಕತ್ತಿ ಹಿಡಿದು ಜನರನ್ನು ಬೆದರಿಸುತ್ತಿದ್ದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ ನಡೆಸಿ ಖ್ವಾಜಾಹುಸೇನ್ ನದಾಫ್ ಎಂಬಾತನನ್ನು ಬಂಧಿಸಿದೆ.

ಬಂಧಿತನಿಂದ ಒಂದು ಕತ್ತಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆಯಲಾಗಿದೆ. ಇನ್ನು ಈತನೊಂದಿಗೆ ಇದ್ದ ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕ್ಯಾಮೆರಾ ಪರ್ಸನ್ ಹೇಮಂತ್ ಕುಮಾರ್ ಜೊತೆ ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ.

About The Author