Hubli News: ಅರಾಜಕತೆ ಅಳಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆಯೊಂದಿಗೆ ಎಬಿವಿಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿವಿಬಿ ಕಾಲೇಜಿನಿಂದ ಚೆನ್ನಮ್ಮ ಸರ್ಕಲ್ವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ‘ಕಾಕ್ರೋಚ್ ಜನತಾ ಪಾರ್ಟಿ’ ಎಂದು ವ್ಯಂಗ್ಯವಾಡಿದ್ದಾರೆ.
ಕೈಯಲ್ಲಿ ಧ್ವಜಗಳು, ಬಾಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು… ಹುಬ್ಬಳ್ಳಿಯ ಬಿವಿಬಿ ಕಾಲೇಜಿನಿಂದ ಆರಂಭವಾದ ಎಬಿವಿಪಿ ಕಾರ್ಯಕರ್ತರ ಪ್ರತಿಭಟನಾ ಪಾದಯಾತ್ರೆ ಚೆನ್ನಮ್ಮ ಸರ್ಕಲ್ವರೆಗೆ ಸಾಗಿತು.
‘ಅರಾಜಕತೆ ಅಳಿಸಿ, ಪ್ರಜಾಪ್ರಭುತ್ವ ಉಳಿಸಿ’ ಎಂಬ ಘೋಷಣೆಯೊಂದಿಗೆ ಬೀದಿಗಿಳಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷವನ್ನು ‘ಕಾಕ್ರೋಚ್ ಜನತಾ ಪಾರ್ಟಿ’ ಎಂದು ವ್ಯಂಗ್ಯವಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜನರ ಗಮನವನ್ನು ಬೇರೆಡೆ ಸೆಳೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರದ ಆಡಳಿತ ವೈಖರಿ ಹಾಗೂ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಆಗ್ರಹಿಸಿದರು.
ಬಿವಿಬಿ ಕಾಲೇಜಿನಿಂದ ಚೆನ್ನಮ್ಮ ಸರ್ಕಲ್ವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಎಬಿವಿಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಒಟ್ಟಿನಲ್ಲಿ, ಹುಬ್ಬಳ್ಳಿಯಲ್ಲಿ ಪಾದಯಾತ್ರೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆ ದಾಖಲಿಸಿದ್ದು, ರಾಜಕೀಯ ವಾಕ್ಸಮರಕ್ಕೆ ಮತ್ತಷ್ಟು ವೇದಿಕೆ ಕಲ್ಪಿಸಿದ್ದಾರೆ.
ಕ್ಯಾಮೆರಾ ಪರ್ಸನ್ ಹೇಮಂತ್ ಕುಮಾರ್ ಜೊತೆ ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ.




