ಕುಮಾರಸ್ವಾಮಿ ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆಯಾಗುವ ಹೇಳಿಕೆ ನೀಡುವುದು ಸರಿಯಲ್ಲ: ಎಂ.ಬಿ.ಪಾಟೀಲ್

Political News: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೋಂಡಾ ಕಂಪನಿ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ಕರ್ನಾಟಕವನ್ನು ತೊರೆಯುವುದಾಗಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ಬಗ್ಗೆ ಮಾತನಾಡಿರುವ ರಾಜ್ಯ ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತು ಮುಂದುವರಿಸಿದ ಪಾಟೀಲ್, ಹೋಂಡಾ ಕಂಪನಿಯ ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿ, ಕರ್ನಾಟಕವನ್ನು ತೊರೆಯುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಆದರೆ, ಹೋಂಡಾ ಕಂಪನಿಯ ಪ್ರತಿನಿಧಿಗಳು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ, ತಾವು ಕುಮಾರಸ್ವಾಮಿಯವರನ್ನು ಭೇಟಿಯೇ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರ, ವಿಶೇಷವಾಗಿ ಕೈಗಾರಿಕಾ ಇಲಾಖೆಯಿಂದ ದೊರೆಯುತ್ತಿರುವ ಸಹಕಾರ ಮತ್ತು ಬೆಂಬಲದ ಬಗ್ಗೆ ಕಂಪನಿಯ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಕುಮಾರ ಸ್ವಾಮಿ ಅವರು ರಾಜ್ಯದ ಕೈಗಾರಿಕಾ ಪ್ರಗತಿಗೆ ಪೂರಕವಾಗಿ ಕೇಂದ್ರದಿಂದ ಹೆಚ್ಚಿನ ಸಹಕಾರ ಒದಗಿಸುವತ್ತ ಗಮನಹರಿಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

About The Author