Political News: ಪುಸ್ತಕ ಬಿಡುಗಡೆ ಸಮಾರಂಭದಲ್ಲಿ 5ನೇ ಸಾಲಿನಲ್ಲಿ ಕುಳಿತಿದ್ದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ನಡೆಸಿದ್ದ ಸೋನಿಯಾ ಗಾಂಧಿಯವರ ಜೀವನಾಧಾರಿತ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆಯ್ದ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದ ಚಿತ್ರ, ವೀಡಿಯೋ ವೈರಲ್ ಆಗಿತ್ತು.

ಈ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯರನ್ನು ಕಡೆಗಣಿಸಲಾಗಿದೆ. ಅವಮಾನಿಸಲಾಗಿದೆ ಎಂದು ಹೇಳಿದ್ದರು. ಇದೀಗ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯನವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಾನು 5ನೇ ಸಾಲಿನಲ್ಲಿ ಕೂತ ಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದೆಯೇ? ಎಂಬ ವಿಷಯದ ಬಗ್ಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮಾಧ್ಯಮಗಳು ಹಾಗೂ ಜಾಲತಾಣಗಳಲ್ಲಿ ನನ್ನ ಹಿತೈಷಿಗಳು, ಅಭಿಮಾನಿಗಳು ಹೀಗೆ ಎಲ್ಲರೂ ಮಾತನಾಡಿದ್ದನ್ನು ಗಮನಿಸಿದ್ದೇನೆ. ಈ ವಿಷಯದ ಕುರಿತಾದ ಚರ್ಚೆಯನ್ನು ಇಲ್ಲಿಗೆ ಕೊನೆಗಾಣಿಸುವ ಉದ್ದೇಶದಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ.

ನಾನು ಸಮಾರಂಭಕ್ಕೆ ತಡವಾಗಿ ತೆರಳಿದ್ದೆ, ಹಾಗಾಗಿ ಮುಂದಿನ ಸಾಲಿನಲ್ಲಿದ್ದ ಖುರ್ಚಿಗಳೆಲ್ಲವೂ ಭರ್ತಿಯಾಗಿದ್ದವು. ಹಿಂದಿನ‌ ಸಾಲಿನಲ್ಲಿ ಕುರ್ಚಿ ಖಾಲಿಯಿದ್ದ ಕಾರಣಕ್ಕೆ ಅಲ್ಲಿಯೇ ಕುಳಿತೆ. ಅದು ನನಗಾಗಿ‌ ನಿಗದಿ ಮಾಡಿದ್ದ ಆಸನವಲ್ಲ, ಮೊದಲು ಬಂದವರು ಮುಂದೆ ಕೂತಿದ್ದರು ಅಷ್ಟೆ ಎಂದು ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

About The Author