Political News: ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲು: ಶಾಸಕ ಸ್ಥಾನಕ್ಕೂ ಕಂಠಕ..?

Political News: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಗೆ ಜಾಮೀನು ರದ್ದಾಗಿದ್ದು, ಮತ್ತೆ ಜೈಲು ಪಾಲಾಗಿದ್ದಾರೆ.

ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ನೀಡಿರುವ ಜಾಮೀನು ರದ್ದುಗ“ಳಿಸುವಂತೆ ಯೋಗೀಶ್ ಗೌಡ ಸಹೋದರ ಸುಪ್ರೀಂ ಮೆಟ್ಟಿಲೇರಿದ್ದರು. ಇಂದು ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ವಿನಯ್ ಶಾಸಕ ಸ್ಥಾನದಿಂದಲೂ ಅನರ್ಹರಾಗಿದ್ದಾರೆ.

ಅರ್ಜಿಗಳ ವಿಚಾರಣೆ ಬಳಿಕ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಟ ಆದೇಶ ನೀಡಿದ್ದು, ಜಾಮೀನು ರದ್ದು ಮಾಡಿದೆ. 2 ವಾರದಲ್ಲಿ ಶರಣಾಗಬೇಕೆಂದು ಸುಪ್ರೀಂ ಸೂಚನೆ ನೀಡಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡರನ್ನ ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಧಾರವಾಡ ಉಪನಗರ ಪೋಲೀಸ್ ಸ್ಟೇಶನ್‌ನಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಬಳಿಕ ಸಿಬಿಐ ತನಿಖೆಗೆ ನಿೀಡಲಾಯಿತು.

ಬಳಿಕ ತನಿಖೆ ನಡೆಸಿದ ಸಿಬಿಐ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವುದು ಕಾಂಗ್ರೆಸ್ ಶಾಸಕ ವಿನಯ್ ಗೌಡ ಎಂಬ ಶಾಕಿಂಗ್ ಸತ್ಯವನ್ನು ಆಚೆ ತಂದಿತ್ತು. ಬಳಿಕ ಇದೇ ವರ್ಷದ ಏಪ್ರಿಲ್‌ನಲ್ಲಿ ವಿನಯ್ ಸೇರಿ ಹತ್ಯೆಯಲ್ಲಿ ಭಾಗಿಯಾದವರನ್ನು ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ವಿನಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ರಾಜ್ಯ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿ, ಮತ್ತೆ ಜೈಲು ಪಾಲಾಗಿದ್ದಾರೆ.

About The Author