Haveri: ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾನಗಲ್ ಮಂಡಲದಿಂದ ಬೃಹತ್ ಪ್ರತಿಭಟನೆ – ಸರ್ಕಾರಕ್ಕೆ ಮನವಿ ಸಲ್ಲಿಕೆ

Haveri: ಹಾನಗಲ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾನಗಲ್ ಮಂಡಲದ ವತಿಯಿಂದ ಇಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಉದಾಸಿ ಕಲ್ಯಾಣ ಮಂಟಪದಿಂದ ತಹಶೀಲ್ದಾರ್ ಕಚೇರಿವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ಮುಖಾಂತರ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾಲಿನ ದರ ಏರಿಕೆ, ಶಕ್ತಿ ಯೋಜನೆಯ ಹೆಸರಿನಲ್ಲಿ ಬಸ್ ಪ್ರಯಾಣ ದರ ಹೆಚ್ಚಳ, ವಿದ್ಯುತ್ ಬಿಲ್ ಏರಿಕೆ ಹಾಗೂ ಆಸ್ತಿ ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳ ಹೆಚ್ಚಳದಿಂದ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನರಿಗೆ ಆರ್ಥಿಕ ಹೊರೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ನಂತರ ಹಾನಗಲ್ ತಹಶೀಲ್ದಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

About The Author