Saturday, July 12, 2025

Latest Posts

ಮಂಡ್ಯದಲ್ಲಿ ಅಂಬಿ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾದ ಸುಮಲತಾ, ದರ್ಶನ್, ಅಭಿಶೇಕ್..

- Advertisement -

ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ರು.

ಅಂಬರೀಷ್ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮಕ್ಕೆ ಸುಮಲತಾ, ಅಭಿಷೇಕ್, ದರ್ಶನ್, ರಾಕ್‌ಲೈನ್ ಭೇಟಿ ನೀಡಿ, ಅಂಬರೀಶ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಸಂಖ್ಯಾತ ಅಭಿಮಾನಿಗಳು ಅಂಬರೀಶ್ ಅವರ ಪುತ್ಥಳಿಗೆ ನಮನ ಸಲ್ಲಿಸಿದರು.

ಮಂಡ್ಯ ತಾಲೂಕು ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಅವರ ಅಭಿಮಾನಿಗಳು ಅಂಬರೀಶ್ ಅವರ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ಅಂಬರೀಶ್ ಅವರ 2ನೇ ವರ್ಷದ ಪುಣ್ಯಸ್ಮರಣೆ ದಿನದಂದು ಅಸಂಖ್ಯಾತ ಅಭಿಮಾನಿಗಳ ಸಮ್ಮುಖದಲ್ಲಿ ದೇವಸ್ಥಾನವನ್ನು ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುಮಲತಾ ಅಂಬರೀಷ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನನ್ನ ಪುತ್ರರಾದ ದರ್ಶನ್ ಮತ್ತು ಅಭಿಷೇಕ್ ಅಂಬರೀಶ್ ಹಾಜರಿದ್ದರು.

ಮಂಡ್ಯ ಜಿಲ್ಲೆಯ 10 ಜನ ವಿಕಲಚೇತನರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ TVS ಸಂಸ್ಥೆಯ ಯಂತ್ರಚಾಲಿತ ಜುಪಿಟರ್ ತ್ರಿಚಕ್ರ ವಾಹನವನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಿತರಣೆ ಮಾಡಲಾಯಿತು.

ಇನ್ನು ಈ ಬಗ್ಗೆ ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಷ್, ತ್ರಿಚಕ್ರವಾಹನ ಪಡೆದ ಫಲಾನುಭವಿಗಳು ಹೊಸ ಜೀವನ ಮತ್ತಷ್ಟು ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

- Advertisement -

Latest Posts

Don't Miss