ಕಾರ್ಮಿಕ ಇಲಾಖೆಯಿಂದ ಡಿಸೆಂಬರ್ 14 ರಿಂದ ಸಕಾಲ ಸಪ್ತಾಹ ಆಚರಣೆ

ಕಲಬುರಗಿ : ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾರ್ಮಿಕ ಇಲಾಖೆಯಿಂದ ಡಿಸೆಂಬರ್ 14 ರಿಂದ 19 ರವರೆಗೆ ಸಕಾಲ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆ ಹಾಗೂ ಇಲಾಖೆಯ ಅಧೀನ ಕಚೇರಿಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ಫಲಾನುಭವಿಗಳ ನೋಂದಣಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ದೊರೆಯುವ ಸೌಲಭ್ಯಗಳಾದ ಶ್ಯೆಕ್ಷಣಿಕ ಧನಸಹಾಯ, ಮದುವೆ ಧನಸಹಾಯ, ಒಳರೋಗಿ ವೈದ್ಯಕೀಯ, ಪ್ರಮುಖ ವೈದ್ಯಕೀಯ, ಹೆರಿಗೆ ಧನಸಹಾಯ ಅರ್ಜಿಗಳ ವಿಲೇವಾರಿ, ಕಟ್ಟಡ ಮತ್ತು ಇತರೆ ನಿರ್ಮಾಣ ಸಂಸ್ಥೆಗಳ ನೋಂದಣಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮತ್ತು ನವೀಕರಣ ಸೇವೆಗಳು ಸಕಾಲ ಯೋಜನೆಯಡಿ ವಿಲೇವಾರಿ ಮಾಡಲಾಗುತ್ತದೆ.

ಸಾರ್ವಜನಿಕರು ಕಾರ್ಮಿಕ ಇಲಾಖೆಯ ಈ ಮೇಲ್ಕಂಡ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸಕಾಲ ಸಪ್ತಾಹದ ಸದುಪಯೋಗ ಪಡೆದುಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಐ.ಟಿ.ಐ ಆವರಣದಲ್ಲಿನ (ಕಾರ್ಮಿಕ ಭವನ) ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

About The Author