- Advertisement -
ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ.
ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್ ಅವರು ಚೈತ್ರದ ಪ್ರೇಮಾಂಜಲಿ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದರು. ಸ್ಟಾರ್ ಹೀರೋಗಳಿಗೆ ನಿರ್ದೇಶನ ಮಾಡುವುದರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
- Advertisement -