Thursday, February 6, 2025

Latest Posts

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

- Advertisement -

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈವರೆಗೆ ಎರಡು ಶವಗಳನ್ನ ತೆಗೆಯಲಾಗಿದೆ. ಸದ್ಯ ಈ ಘಟನೆಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರೋ ಕಿಚ್ಚ ಸುದೀಪ್, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ, ಮೊದಲು ಮಾನವನಾಗು ಎಂದು ಪೋಸ್ಟ್ ಮಾಡಿದ್ದಾರೆ.

- Advertisement -

Latest Posts

Don't Miss