Saturday, December 21, 2024

Latest Posts

‘ದ್ವೇಷ, ಕಿತ್ತಾಟ ಬೇಡ’- ಮಂಡ್ಯ ಜನತೆಗೆ ಸುಮಲತಾ ಶಾಂತಿ ಮಂತ್ರ

- Advertisement -

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಪ್ರಮೋಟ್ ಆಗಿರೋ ಸುಮಲತಾ ಅಂಬರೀಶ್ , ಮಂಡ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ಸುಮಲತಾ,’ನನ್ನ ಎಲ್ಲಾ ಬಂಧುಗಳೇ ..ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು. ಪರಸ್ಪರ ಹೊಂದಾಣಿಕೆಯ ಜೀವನ ನಡೆಸುತ್ತಿರುವವರು. ಚುನಾವಣೆಯ ದ್ವೇಷಗಳನ್ನು ವೈಷಮ್ಯಗಳನ್ನು ಚುನಾವಣೆಗೆ ಬಿಟ್ಟುಬಿಡಬೇಕು.. ಚುನಾವಣೆ ಮುಗಿದು ಫಲಿತಾಂಶ ಬಂದ ನಂತರವೂ ಅದನ್ನು ಮುಂದುವರಿಸಬಾರದು. ಒಂದೇ ಕುಟುಂಬದಂತೆ ನಾವೆಲ್ಲರೂ ಬದುಕಬೇಕಾಗಿದೆ. ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಇವೆಲ್ಲವೂ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ಚುನಾವಣೆಯ ನಂತರ ನಮ್ಮ ಊರು ನಮ್ಮ ಸಮಸ್ಯೆ ಗಳ ವಿಚಾರದಲ್ಲಿ ಸಾಮೂಹಿಕವಾಗಿ ಚರ್ಚಿಸಬೇಕು ಚಿಂತಿಸಬೇಕು. ಮಂಡ್ಯದ ಜನತೆಯಾದ ನಾವೆಲ್ಲರೂ ಒಂದೇ ಕುಟುಂಬದಂತೆ ಬದುಕೋಣ. ರಾಜಕೀಯ ಕಿತ್ತಾಟಗಳನ್ನು ದಯವಿಟ್ಟು ಯಾರೂ ಮಾಡಬೇಡಿ .ಇದು ನನ್ನ ಜನತೆಯಲ್ಲಿ ನನ್ನ ಪ್ರೀತಿಯ ಮನವಿ’ ಅಂತ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ದ್ವಾರಕಾನಾಥ್ ಗುರೂಜಿ ಸಿಎಂ ಕುಮಾರಸ್ವಾಮಿಗೆ ಹೇಳಿದ್ದ ಭವಿಷ್ಯ ಸುಳ್ಳಾ? ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ವಿಡಿಯೋದಲ್ಲಿದೆ. ತಪ್ಪದೇ ನೋಡಿ.

- Advertisement -

Latest Posts

Don't Miss