ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ ಮೋಸವಾಗುತ್ತಿದೆ. ಇಂತಹ ನಡೆಗಳು ಉದ್ಯಮಕ್ಕೆ ಒಳ್ಳೆಯದಲ್ಲ. ಈಗಾಗಲೇ ಸ್ವತಃ ವಿಶ್ವ ಸಂಸ್ಥೆಯೇ ಪ್ರತಿ ಡೋಸ್ ಲಸಿಕೆಗೆ ಮೂರು ಅಮೇರಿಕನ್ ಡಾಲರ್ ದರ ನಿಗಧಿ ಪಡಿಸಲು ಅನುಮತಿ ನೀಡಿದೆ. ಆದರೆ, ನಮ್ಮ ಕೇಂದ್ರ ಸರ್ಕಾರ ಏಕೆ 2 ಡಾಲರ್ ಬೆಲೆಗೆ ಲಸಿಕೆ ನೀಡುತ್ತಿದೆ ಎಂದು ಟ್ವಿಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪ್ರಶ್ನೆ ಮಾಡಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ೧೯ ಲಸಿಕೆಗೆ 250 ರೂಪಾಯಿ ಬೆಲೆ ನಿಗದಿ ಪಡಿಸಿರುವ ಸರ್ಕಾರದ ಕ್ರಮಕ್ಕೆ ಲಸಿಕೆ ತಯಾರಕರು ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಕೊರೊನಾ ಲಸಿಕೆ ತಯಾರಿಸುವ ಕಂಪನಿಗಳಿಗೆ ಸಬ್ಸಿಡಿ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.