ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಇವತ್ತು ಹುಟ್ಟುಹಬ್ಬದ ಸಂದರ್ಭ. 68ನೇ ವಯಸ್ಸಿಗೆ ಕಾಲಿರಿಸಿದ ಸದಾನಂದ ಗೌಡರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸದಾನಂದಗೌಡರು ಅನುಭವಿ ನಾಯಕರಾಗಿದ್ದು, ನಮ್ಮ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಕೆಲಸ ಮಾಡಿದ್ದಾರೆ. ಪ್ರಮುಖ ರಾಸಾಯನಿಕಗಳು ಮತ್ತು ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆಯನ್ನು ಖಾತ್ರಿಪಡಿಸುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರ ದೀರ್ಘ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪ್ರಧಾನಿಯಷ್ಟೇ ಅಲ್ಲದೇ, ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ, ಪ್ರಕಾಶ್ ಜಾವಡೇಕರ್ ಕೂಡ ಸದಾನಂದಗೌಡರಿಗೆ ಬರ್ತ್‌ಡೇ ವಿಶ್ ಮಾಡಿದ್ದಾರೆ. ಹಿರಿಯ ನಾಯಕರು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಆತ್ಮೀಯರೂ ಆದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಸದಾನಂದಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ನಮ್ರತೆ ಮತ್ತು ಭೂಮಿಯ ಸ್ವಭಾವಕ್ಕೆ ಎಲ್ಲರೂ ಮೆಚ್ಚುತ್ತಾರೆ. ಅವರು ರಾಷ್ಟ್ರ ಮತ್ತು ಪಕ್ಷಕ್ಕೆ ಹಲವಾರು ಸಾಮರ್ಥ್ಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಸಂಪೂರ್ಣ ಸಮರ್ಪಣೆಯೊಂದಿಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ಜಾವಡೇಕರ್ ಕೂಡ ಟ್ವೀಟ್ ಮಾಡುವ ಮೂಲಕ ಸದಾನಂದಗೌಡರಿಗೆ ವಿಶ್ ಮಾಡಿದ್ದಾರೆ.