ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531

ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದು ಎಂದಿದ್ದಾರೆ.
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಇನ್ನು ರಾಜ್ಯಕ್ಕೆ ಕೊರೊನಾ ಲಸಿಕೆ ಬಂದ ಬಗ್ಗೆ ಟ್ವೀಟ್ ಮಾಡಿರುವ ಡಾ.ಸುಧಾಕರ್, ನೆನ್ನೆ ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507