‘ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ’

ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320. ಮುಖ್ಯಮಂತ್ರಿಗಳು ಮತ್ತು ಸಚಿವ ಸುಧಾಕರ್ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ಕೊರೊನಾ ಉಲ್ಭಣಕ್ಕೆ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ಸುಳ್ಳು ಹೇಳಿರುವುದು ಕೊರೊನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ,ಮಾಸ್ಕ್,ಸ್ಯಾನಿಟೈಸರ್ ಪಿಪಿ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿ ವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿಗಳು ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕು. ಕೊರೊನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

About The Author