- Advertisement -
www.karnatakatv.net: ರಾಜ್ಯ- ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಮಳೆಸುರಿಯುತ್ತಿದೆ. ಹೀಗಾಗಿ, ಜೂನ್ 17ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ದ.ಕನ್ನಡ, ಉಡುಪಿ, ಉ.ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
- Advertisement -