- Advertisement -
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ 2ನೇ ಅಲೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಇದೀಗ 3ನೇ ಅಲೆ ರಾಜ್ಯದ ಜನತೆಯಲ್ಲಿ ಆತಂಕ ಸೃಷ್ಠಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಎಂಬ ಹೊಸ ವೈರಸ್ ಕಾಣಿಸಿಕೊಂಡಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದ್ದು, ಈ ಮೂಲಕ ಜನರಲ್ಲಿ ಹೆಚ್ಚಿನ ಭಯ ಹುಟ್ಟಿಸಿದೆ. ಈ ರೂಪಾಂತರಿ ಅತ್ಯಂತ ಅಪಾಯಕಾರಿ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
- Advertisement -