www.karnatakatv.net: ಅಂತರಾಷ್ಟ್ರೀಯ: ಬೀಜಿಂಗ್- ಮಧ್ಯಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಬೆಂಕಿಗಾಹುತಿಯಾಗಿದ್ದಾರೆ. ಇನ್ನು, ಈ ಘಟನೆಯಲ್ಲಿ 16 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಿಗಿನವರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬೆಂಕಿ ಕಾಣಿಸಿಕೊಂಡಾಗ ಶಾಲಾ ಆವರಣದಲ್ಲಿ 34 ವಿದ್ಯಾರ್ಥಿಗಳಿದ್ರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿದ್ದಾರೆ. ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.




