ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್

www.karnatakatv.net: ರಾಷ್ಟ್ರೀಯ- ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಈ ರೈಲು ಮಡ್ಗಾಂವ್ ನಿಲ್ದಾಣಕ್ಕೆ ಹೊರಟ್ಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಿಂದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

About The Author