Wednesday, July 2, 2025

Latest Posts

ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ

- Advertisement -

www.karnatakatv.net:ರಾಜ್ಯ: ಬೆಂಗಳೂರು- ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜುಲೈ 30ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ, ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ, ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಈಗಾಗಲೇ ಮೌಲ್ಯಮಾಪನದ ಬಗ್ಗೆ 12 ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ, ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಆತಂಕ ಬೇಡ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದರು.

- Advertisement -

Latest Posts

Don't Miss