www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಆದ್ರೆ, ಅದೇ ಅವಧಿಯಲ್ಲಿ ಕೊವಿಡ್ 3ನೇ ಅಲೆ ಅಪ್ಪಳಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಎಚ್ಚರಿಕೆ ನೀಡಿದ್ದಾರೆ ಎಂದು ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಗುಡುಗಿದ್ರು. ಕೊವಿಡ್ ಆತಂಕದ ಜೊತೆಗೆ ಇಡೀ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಪರೀಕ್ಷೆ ನಡೆಸಲು ಹೊರಟಿರುವುದು ಆತುರದ ತೀರ್ಮಾನವಾಗಿದ್ದು, ಅವೈಜ್ಞಾನಿಕವಾಗಿದೆ. ಈ ತೀರ್ಮಾನವನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಹಳ್ಳಿ ಹಕ್ಕಿ ಆಗ್ರಹಿಸಿದ್ರು.




