www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ ಮಾಡಲಿದ್ದೇನೆ. ದೆಹಲಿಯಲ್ಲಿ ಇನ್ನೆರಡು ಇದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ತಿಳಿಸುತ್ತೇನೆ ಎಂದ್ರು. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಸಲಹೆ ಮೇರೆಗೆ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರಂತೆ. ರಮೇಶ್ ಜಾರಕಿಹೊಳಿ ಮತ್ತು ಹೈಕಮಾಂಡ್ ನಾಯಕರ ನಡುವೆ ಫಡ್ನವಿಸ್ ಅವರು ಸಮನ್ವಯ ಸಾಧಿಸುತ್ತಿದ್ದಾರೆ ಎನ್ನಲಾಗುತ್ತಿದೆ. ದೆಹಲಿ ನಾಯಕರನ್ನ ಭೇಟಿ ಮಾಡಲಿರುವ ರಮೇಶ್ ಜಾರಕಿಹೊಳಿ ಮುಂದಿನ ರಾಜಕೀಯ ನಿರ್ಧಾರ ಎಲ್ಲರಲ್ಲೂ ಕೂತುಹಲ ಮೂಡಿಸಿದೆ. ಶಾಸಕ ರಾಜೀನಾಮೆ ನೀಡುತ್ತಾರಾ? ಇಲ್ಲವೇ ಮತ್ತೆ ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಾರಾ ಎಂಬ ಕೂತುಹಲ ಎಲ್ಲರಲ್ಲೂ ಮನೆ ಮಾಡಿದೆ.




