www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ 2,800 ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಎಂಜಿನೀಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಡಿಪ್ಲೋಮಾ, ಜಿಸಿಐಟಿ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚುರುಕಾಗಿ ಲಸಿಕೆ ಕೊಡಲಾಗುವುದು ಎಂದ್ರು. ಇನ್ನು, ಮುಖ್ಯಮಂತ್ರಿಗಳ ಕೌಶಲ್ಯ ಯೋಜನೆ ಅಡಿ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಕೇಂದ್ರದಿಂದ ಉತ್ತಮವಾಗಿ ಲಸಿಕೆ ಪೂರೈಕೆ ಆಗುತ್ತಿದೆ. ಇಡೀ ದೇಶದಲ್ಲಿಯೇ ಲಸಿಕೆ ನೀಡುವಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.




