www.karnatakatv.net: ರಾಜ್ಯ- ಚಾಮರಾಜನಗರ- ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹೇಳಿದ್ರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಖ್ಯಮಂತ್ರಿಗಳು ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದ್ರು. ಇದೇ ವೇಳೆ, ಕೊರೊನಾ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ರೀತಿ ಕೆಲಸ ಮಾಡಿದ ಬಿಜೆಪಿ ಪ್ರಮುಖರನ್ನ ಶ್ಲಾಘಿಸಿದ್ರು.ಇನ್ನು, ಜಿಲ್ಲೆಯ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳುವಂತೆ ಮಾಡಬೇಕು. ಪಕ್ಷ ತಾಯಿ ಇದ್ದಂತೆ, ಪಕ್ಷಕ್ಕೆ ನಿಷ್ಟರಾಗಿ ಕೆಲಸ ಮಾಡಬೇಕು ಎಂದ್ರು.ಇದೇ ವೇಳೆ ಕ್ರೀಡಾ ಕ್ಷೇತ್ರದ ಬಗ್ಗೆ ಮಾತನಾಡುತ್ತಾ, ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಪ್ರತೀ ತಾಲೂಕಿನಲ್ಲೂ ಸುಸಜ್ಜಿತ ಕ್ರೀಡಾಂಗಣ ಇರಬೇಕೆಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಪತ್ರ ಬರೆಯಲಾಗಿದೆ. ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಾ.ನಾರಾಯಣಗೌಡ್ರು ಹೇಳಿದ್ರು. ಇನ್ನು, ಶಾಸಕ ನಿರಂಜನ್ ಕುಮಾರ್, ಜನರಲ್ ಸೆಕ್ರೇಟ್ರಿ ನಾಗಶ್ರೀ, ನಗರ ಅಧ್ಯಕ್ಷ ರಾಜು, ಗ್ರಾಮೀಣ ಅಧ್ಯಕ್ಷ ಬಸವಣ್ಣ , ನಗರಸಭೆ ಸದಸ್ಯೆ ಆಶಾ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.




