www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸಮಯಕ್ಕೆ ಸರಿಯಾಗಿ ಏರ್ ಬ್ಯಾಗ್ ಓಪನ್ ಆದ ಕಾರಣ ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಗೊತ್ತಾಗಿದೆ. ಇನ್ನು, ಗುರುರಾಜ್ ತಲೆ ಮತ್ತು ಕಾಲಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಚೆನ್ನಾಗಿಯೇ ಇದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.




