- Advertisement -
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು ರಾತ್ರಿಯಿಡೀ ಸುರಿಯುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.
- Advertisement -