- Advertisement -
www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ ಹೀಗೆ ಆಡುತ್ತಿದ್ದರೆ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂದಿದ್ದಾರೆ. ಇತ್ತ ಹೆಚ್ಡಿಕೆ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಿ ಎಂದು ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ.
- Advertisement -