ನಟಿ ಶೃತಿ ಅವರಿಗೆ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

www.karnatakatv.net: ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷೆಯಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಕರ್ನಾಟಕ ಮದ್ಯಪಾನ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ನೀಡಲಾಗಿತ್ತು. ಈದರ ಬಗ್ಗೆ ಅಧಿಸೂಚನೆ ಹೊರಡಿಸಿರುವ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ, “ಮುಖ್ಯಮಂತ್ರಿ ಅವರ ಗೃಹ ಕಚೇರಿಯ ಟಿಪ್ಪಣಿಯಂತೆ ಶೃತಿಯವರನ್ನು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ” ಎಂದು ತಿಳಿಸಿದ್ದಾರೆ.

About The Author