ಇಂದು ಪಿಯುಸಿ ಫಲಿತಾಂಶ ಪ್ರಕಟ

www.karnatakatv.net : ಬೆಂಗಳೂರು : ಕೊರೊನಾ ನಡೆವೆಯೂ ಎಸ್ಎಸ್ ಎಲ್ಸಿ  ಪರೀಕ್ಷೆಯನ್ನು ಸುಸೂತ್ರವಾಗಿ  ನಡೆಸಿದ ಸರ್ಕಾರ  ಈಗ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಿದ್ಧವಾಗಿದೆ ಇಂದು ಸಾಯಂಕಾಲ 4 ಗಂಟೆಗೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು https://karresults.nic.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನಿರ್ಣಯ ಆಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್ ಅವರು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

About The Author