ಎಲ್ಲಾ ಪಿಯುಸಿ ವಿದ್ಯಾರ್ಥಿಗಳು ಪಾಸ್

www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಬಾರಿಯ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಿಯುಸಿ ಉತ್ತೀರ್ಣರಾಗುವ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಪದವಿ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

About The Author