Thursday, October 30, 2025

Latest Posts

ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ

- Advertisement -

www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ.

ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸಲಹೆ ನೀಡಲಾಗಿದೆ. ರಾಜ್ಯ ಸರ್ಕಾರ ಹಂತ ಹಂತವಾಗಿ ಶಾಲೆಗಳನ್ನು ತೆರೆಯುವ ಸಂಬಂಧ ಆಲೋಚಿಸುತ್ತಿದ್ದು, ಮೊದಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಶಾಲೆಗಳು ತೆರೆಯುವ ಸೂಚನೆಯಿರುವುದಾಗಿ ಮೂಲಗಳು ತಿಳಿಸಿವೆ.

ಬೆಳಗ್ಗೆ ಒಂದನೇ ತರಗತಿಯಿಂದ ಮೂರನೇ ತರಗತಿ ಮಕ್ಕಳಿಗೆ ತರಗತಿಗಳನ್ನು ನಡೆಸಿ, ಮಧ್ಯಾಹ್ನ 4ನೇ ತರಗತಿ ಐದನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವುದಾಗಿ ತಿಳಿದುಬಂದಿದೆ. ಈ ತರಗತಿಗಳು ಆರಂಭವಾದ ಕೆಲವು ವಾರಗಳ ಬಳಿಕ ನಾಲ್ಕನೇ ತರಗತಿಯಿಂದ ಎರಡನೇ ಪಿಯುಸಿವರೆಗೆ ಶಾಲಾ ಕಾಲೇಜುಗಳನ್ನು ತೆರೆಯಲಾಗುವುದು ಎಂದು ತಿಳಿದುಬಂದಿದೆ.

- Advertisement -

Latest Posts

Don't Miss