ಬೆಂಗಳೂರು: ಇಂದು ಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿ ನಗರ ವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.45ರ ಸುಮಾರಿಗೆ ಗ್ರೇನೇಡ್ ಪತ್ತೆಯಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆ ವಸ್ತುವನ್ನು ಪರಿಶೀಲನೆ ನಡೆಸಿದ್ರು.
ಕಂಟ್ರಿಮೇಡ್ ಗ್ರೆನೇಡ್ ಅಂತ ಪೊಲೀಸರು ಅದನ್ನು ಖಾತರಿಪಡಿಸಿದ್ದಾರೆ. ಇದನ್ನು ರೈಲ್ವೇ ನಿಲ್ದಾಣಕ್ಕೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಇಟ್ಟು ಹೋಗಿರೋ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ನ ಎಲ್ಲಾ ಪ್ಲಾಟ್ ಫಾರಂನಲ್ಲಿ ತೀವ್ರ ತಪಾಸಣೆ ಕೈಗೊಂಡು, ಪ್ರತಿಯೊಂದು ರೈಲಿನಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.
ಸದ್ಯಕ್ಕೆ ಯಾವುದೇ ಅಪಾಯವಿಲ್ಲ ,ಇನ್ನು ಆ ಅಪರಿಚಿತ ವ್ಯಕ್ತಿ ಯಾವ ಉದ್ದೇಶದಿಂದ ಈ ಕೃತ್ಯವೆಸಗಿದ್ದಾನೆ ಅನ್ನೋ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಅಂತ ಬೆಂಗಳೂರು ರೈಲ್ವೇ ಎಡಿಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.