ಭಾರತಕ್ಕೆ ಮೊದಲ ಬೆಳ್ಳಿ ಪದಕ

www.karnatakatv.net : ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

49 ಕೆ ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ತೂಕದೊಂದಿಗೆ ಕಂಚು ಪದಕ ಗಳಿಸಿದ್ದಾರೆ.

ಇಂದು ಸ್ಮರಣೀಯಗಳಿಗೆಯಲ್ಲಿ ಬೆಳ್ಳಿ ಪದಕ ಗಳಿಸುವ ಮೂಲಕ ಚಾನು ಅವರು ಒಲಿಂಪಿಕ್ ಗೇಮ್ ನ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗಳಿಸಿದ ಎರಡನೇ ಭಾರತೀಯರಾಗಿದ್ದಾರೆ.

About The Author