www.karnatakatv.net : ಬೆಳಗಾವಿ: ಖಾನಾಪುರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರು ತಮ್ಮ ಅಳಲನ್ನ ತೂಡಿಕೊಂಡರು.
ಹಲವು ದಿನಗಳ ಹಿಂದೆ ಸತತವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳು ಪ್ರವಾಹಕ್ಕೆ ತುತ್ತಾದವು ಹಾಗೇಯೆ ಜಿಲ್ಲೆಯ ಖಾನಾಪೂರ ತಾಲೂಕು ಸಹ ಮಲಪ್ರಭಾ ನದಿಯಿಂದ ಪ್ರವಾಹಕ್ಕೆ ತುತ್ತಾಯಿತು .ಇದರಿಂದ ಖಾನಾಪುರ ತಾಲೂಕಿನ ಶಾಸಕರಾದ ಅಂಜಲಿ ನಿಂಬಾಳ್ಕರ ಮನೆ ,ದುರ್ಗಾ ನಗರ, ಫಿಶ್ ಮಾರ್ಕೆಟ್, ಮಾರುತಿ ನಗರ, ಪೊಲೀಸ್ ತರಬೇತಿ ಕೇಂದ್ರ, ಮಲಪ್ರಭಾ ನದಿಯ ಹೊಸ ಮತ್ತು ಹಳೆ ಸೇತುವೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ದುರ್ಗಾ ನಗರದ ನಿವಾಸಿಗಳು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದರು. ಪ್ರತಿ ವರ್ಷ ಪ್ರವಾಹದಿಂದ ನಾವು ತತ್ತರಿಸಿ ಹೋಗುತ್ತಿದ್ದೇವೆ. ನಮಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ನಾವು ಸರ್ಕಾರದಲ್ಲಿ ಇಲ್ಲ ಹೀಗಾಗಿ ಅಧಿವೇಶನ ಕರೆದು ನೆರೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲು ಸರಕಾರಕ್ಕೆ ಒತ್ತಾಯಿಸುತ್ತೇನೆ. ಮತ್ತು ಪರಿಹಾರ ನೀಡಲು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯಗೆ ಸಾಥ್ ನೀಡಿದರು.

