ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ

www.karnatakatv.net : ಬೆಳಗಾವಿ:  ಜಿಲ್ಲೆಯಾದ್ಯಾಂತ ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಪೂರ್ವ ತಯಾರಿ ಕುರಿತು ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು.

ಶುಕ್ರವಾರ ನಗರದ ಖಾಸಗಿ ಹೋಟೆಲನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮುಂಬರುವ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹಾಗೂ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷಿಗಳು  ಕುರಿತು ನಗರದ ಖಾಸಗಿ ಹೋಟೆಲನಲ್ಲಿ ಪತ್ರಿಕಾಗೋಷ್ಠಿಯನ್ನ  ನಡೆಸಲಾಯಿತು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ರೋಮಿ ಭಾಟಿ. ಮಾತನಾಡಿ ಬೆಳಗಾವಿ ಜಿಲ್ಲೆಗೆ ಒಂದು ದಿನದ ಪ್ರವಾಸ ಕೈಗೊಂಡು ಪಕ್ಷ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಾದ ನಿಪ್ಪಾಣಿ,ಗೋಕಾಕ,ಸಂಕೆಶ್ವರ, ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಭೆ ನಡೆಸಿ ಪಕ್ಷ ಬಲಪಡಿಸಲಾಗುವುದು ಎಂದು ತಿಳಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆದೇಶದಂತೆ ದೇಶದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಅದೇರೀತಿ ಪಕ್ಷವನ್ನ ಅಧಿಕಾರಕ್ಕೆ ತರುವಂತಹ ಕೆಲಸ ಮಾಡಬೇಕಿದೆ ಎಂದರು.

ಬೆಳಗಾವಿ ಜಿಲ್ಲೆಯಾದ್ಯಂತ ಪಕ್ಷವನ್ನ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು.ಇವಾಗ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಸಲಿಕೆ ಅರವಿಂದ ಕೇಜ್ರಿವಾಲ್ ಅವರು ಸೂಚನೆ ನೀಡಿದ್ದಾರೆ.ಈ ನಿಟ್ಟಿನಲ್ಲಿ ಬೆಳಗಾವಿ ಆಮ್ ಆದ್ಮಿ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ‌ ರಾಜ್ಯದ ವೀಕ್ಷಕರು ಹಾಗೂ ರಾಷ್ಟ್ರೀಯ ನಾಯಕ ರೋಮಿ ಭಾಟಿ,ಸಂತೋಷ ನರಗುಂದ ಜಿಲ್ಲಾ ವೀಕ್ಷಕರು,ಅಬ್ದುಲ್ ತವಾಭ್ ಶೇಖ,ನಗರ ಸಂಚಾಲಕ ಅರವಿಂದ ಕಬಾಡಿಯಾ,ನಿರ್ದೇಶಕ ಸದಾನಂದ ಕಲರಕೊಪ್ಪ,‌ ಮಂಜುನಾಥ ಕಡಲಗಿ,‌ ಶಂಕರ ಹೆಗಡೆ, ವಿಜಯ ಪಾಟೀಲ, ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

About The Author