ಬೆಂಗಳೂರು: ಮುನವ ಸಂಪನ್ಮೂಲ ಸಚಿವರಿಗೆ ಸಲ್ಲಿಸಲಾಗಿರೋ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿರುವ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ,ಕನ್ನಡದ ಮೇಲೆ ಹಿಂದಿ ಭಾಷೆಯ ಸವಾರಿ ಬೇಕಿಲ್ಲ. ಬಲವಂತ ಹಿಂದಿ ಹೇರಿಕೆಯನ್ನ ಸಹಿಸಲಾಗದು. ನೆಲ,ಜಲ,ಭಾಷೆ ವಿಚಾರದಲ್ಲಿ ರಾಜಿಯಿಲ್ಲ. ರಾಜ್ಯದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ನಿಲ್ಲಬೇಕು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ನಮಗೆ ಬೇಡ. ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು, ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಅಂತ ಟ್ವೀಟ್ ಮಾಡೋ ಮೂಲಕ ಸಿದ್ದರಾಮಯ್ಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ತ್ರಿಭಾಷಾ ಸೂತ್ರ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಬಹುತೇಕ ಭಾಗಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಪ್ರಮುಖವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಇವರಿಗೆ ಮೋದಿ ಕೊಟ್ರು ಬಂಪರ್ ಗಿಫ್ಟ್. ಮಿಸ್ ಮಾಡದೇ ಈ ವಿಡಿಯೋ ನೋಡಿ