www.karnatakatv.net : ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷಪಟ್ಟ ಕೆ.ಎಲ್.ರಾಹುಲ್ ಅವರಿಗೆ ಅವಕಾಶಗಳೇ ಸಿಗದೆ ನಿರಾಶನಾಗಿದ್ದೆ ಎಂದು ಹೇಳಿದರು. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣ ಮಾಡಿದ್ದರೂ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದೆ ಎಂದು ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರಾಹುಲ್ ಆಡುವ ಅವಕಾಶ ಪಡೆದಿದ್ದರು. 2079ರ ಆಗಸ್ಟ್ ಬಳಿಕ ರಾಹುಲ್ ಆಡಿದ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಆರಂಭಿಕರಾಗಿದ್ದ ಶುಭ್ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಗಾಯಗೊಂಡ ಕಾರಣ ರಾಹುಲ್ ಈ ಸ್ಥಾನ ಲಭಿಸಿತ್ತು.
ಸಿಕ್ಕ ಅವಕಾಶವನ್ನು ಬಳಸಿಕೊಂಡ ರಾಹುಲ್ ಪಂದ್ಯದಲ್ಲಿ ಭಾರತದ ಪರ ಅತೀ ಹೆಚ್ಚು ರನ್ ಬಾರಿಸಿದ್ದರು. ರೋಹಿತ್ ಶರ್ಮಾ ಜೊತೆ ರಾಹುಲ್ ಮೊದಲ ಇನ್ನಿಂಗ್ಸ್ ನಲ್ಲಿ 84 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 26 ರನ್ ಬಾರಿಸಿದ್ದರು.
ಕಳೆದ ವರ್ಷದ ಅಂತ್ಯದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣಿಸಿದ್ದರೂ ರಾಹುಲ್ ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ನಂತರ ಭಾರತದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ರಾಹುಲ್ ಗೆ ಅವಕಾಶ ಸಿಕ್ಕಿರಲಿಲ್ಲ.


